ವಿದ್ಯಾಸಿರಿ (OBC) ವಿದ್ಯಾರ್ಥಿ ವೇತನ : ಆನ್-ಲೈನ್ ಅರ್ಜಿ ಪ್ರಾರಂಭ.
2019-20 ನೇ ಸಾಲಿಗೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ”, “ಶುಲ್ಕ ವಿನಾಯಿತಿ”, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ”, ಮತ್ತು “ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ” ಸೌಲಭ್ಯಕ್ಕಾಗಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ / ಅರೆಅಲೆಮಾರಿ ವಿದ್ಯಾರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31-10-2019
ಅರ್ಹತೆಗಳು:
1.ಅ) ಭಾರತದ ಪ್ರಜೆಯಾಗಿದ್ದು, ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
ಆ) ಭಾರತ ಸರ್ಕಾರ ಅಥವಾ ರಾಜ್ಯ ಸರ್ಕಾರ ಅಧಿಸೂಚಿಸಿರುವ, ಇತರೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿರಬೇಕು.
ಇ) ಕರ್ನಾಟಕದ ಶಾಸನಬದ್ದ ವಿಶ್ವವಿದ್ಯಾಲಯಗಳ ಅಧೀನಕ್ಕೆ ಒಳಪಡುವ, ಸರ್ಕಾರಿ / ಸ್ಥಳೀಯ ಸಂಸ್ಥೆ/ ಅನುದಾನಿತ
ಸಂಸ್ಥೆಗಳು / ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಸಂಸ್ಥೆಗಳಲ್ಲಿ – ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ
ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಾಗಿರಬೇಕು.
2.ಯಾವುದೇ ಇಲಾಖೆಯ ಸರ್ಕಾರಿ / ಸರ್ಕಾರಿ ಅನುದಾನಿತ ವಿದ್ಯಾರ್ಥಿನಿಲಯ / ವಸತಿ ಕಾಲೇಜುಗಳಲ್ಲಿ, ಪ್ರವೇಶ ದೊರೆಯದ ಹಾಗೂ ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುವ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ, ವಿದ್ಯಾಸಿರಿ- ಊಟ ಮತ್ತು ವಸತಿ ಕಾರ್ಯಕ್ರಮದಲ್ಲಿ ಮಂಜೂರಾತಿ ನೀಡಲಾಗುವುದು.
3.ಈ ಯೋಜನೆಯಡಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ, ಪ್ರತಿ ತಿಂಗಳಿಗೆ ರೂ.1500/-ರಂತೆ, ಶೈಕ್ಷಣಿಕ ಅವಧಿಯ 10 ತಿಂಗಳಿಗೆ ಒಟ್ಟು ರೂ.15,000/- ಸಹಾಯಧನವನ್ನು, ಇತರೆ ನಿಬಂಧನೆಗಳಿಗೊಳಪಟ್ಟು, ವಿದ್ಯಾರ್ಥಿಗಳು ಯಾವುದಾದರೂ ಕೋರ್ ಬ್ಯಾಂಕಿಂಗ್ ವ್ಯವಸ್ಥೆ ಇರುವ ಬ್ಯಾಂಕಿನಲ್ಲಿ ತೆರೆದಿರುವ ಬ್ಯಾಂಕ್ ಖಾತೆಗೆ, ಆನ್‍ಲೈನ್ ಮೂಲಕ ಜಮಾ ಮಾಡಲಾಗುವುದು.
4.ವಿದ್ಯಾರ್ಥಿಗಳು
(i)ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶ,
(ii)ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು
(iii)ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ-ಇವುಗಳಲ್ಲಿ ಯಾವುದಾದರೂ ಒಂದು ಸೌಲಭ್ಯಕ್ಕೆ ಮಾತ್ರ ಅರ್ಹರಿರುತ್ತಾರೆ.
5.ಈ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹರಾದವರು, ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
6.ಅ) ಈ ಮೇಲಿನ ಸೌಲಭ್ಯ ಪಡೆಯಲು ವಿದ್ಯಾರ್ಥಿಯ, ತಂದೆ-ತಾಯಿ/ಪೋಷಕರ ಕುಟುಂಬದ, ಒಟ್ಟು ವಾರ್ಷಿಕ ವರಮಾನ (Gross Annual Income) ಈ ಕೆಳಗೆ ನಿಗದಿಪಡಿಸಿದ ಮಿತಿಯೊಳಗೆ ಇರಬೇಕು.
(i) ಪ್ರವರ್ಗ-1 ರ ವಿದ್ಯಾರ್ಥಿಗಳಿಗೆ ರೂ.2.50 ಲಕ್ಷ
(ii) ಪ್ರವರ್ಗ-2ಎ, 3ಎ ಮತ್ತು 3ಬಿ ವಿದ್ಯಾರ್ಥಿಗಳಿಗೆ ರೂ.1.00 ಲಕ್ಷ
ಆ) ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದವಾಗಿರಬೇಕು ಹಾಗೂ ವ್ಯಾಸಂಗ ಮಾಡುವ ಕಾಲೇಜಿನಿಂದ ಕನಿಷ್ಟ 5 ಕಿ.ಮೀ. ದೂರದವರಾಗಿರಬೇಕು.
ಆದರೆ, ವಿದ್ಯಾರ್ಥಿಯ ಸ್ವಂತ ಸ್ಥಳ, ನಗರ/ಪಟ್ಟಣ ಆಗಿದ್ದು, ಅವರು ಬೇರೆ ನಗರ/ಪಟ್ಟಣದಲ್ಲಿ ಇರುವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ, ಅಂತಹವರು ಈ ಸೌಲಭ್ಯಕ್ಕೆ ಅರ್ಹರಿರುತ್ತಾರೆ. ಇ) ಹೊಸ ಮತ್ತು ನವೀಕರಣ ವಿದ್ಯಾರ್ಥಿಗಳು ಈ ಸೌಲಭ್ಯ ಪಡೆಯಲು ಈ ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಈ ಕೆಳಗಿನಂತೆ ಕನಿಷ್ಠ ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು.
ಕ್ರ. ಸಂ. ಪ್ರವರ್ಗ ಹೊಸ ನವೀಕರಣ
1 ಪ್ರವರ್ಗ-1 40% 50%
2 ಪ್ರವರ್ಗ-2ಎ, 3ಎ ಮತ್ತು 3ಬಿ 50% 60%
(ಒಂದು ವೇಳೆ, ವೈದ್ಯಕೀಯ ಕಾರಣಗಳಿಂದಾಗಿ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದಿದ್ದಲ್ಲಿ, ಅಂತಹವರು, ವೈದ್ಯಕೀಯ
ಮಂಡಳಿಯಿಂದ ಪ್ರಮಾಣ ಪತ್ರ ಪಡೆದು ಸಲ್ಲಿಸಬೇಕು.)
- ಅ) ಸಮಾನ ಕೋರ್ಸುಗಳಲ್ಲಿ ಒಂದಕ್ಕಿಂತ ಹೆಚ್ಚು ಬಾರಿ ವ್ಯಾಸಂಗ ಮಾಡುತ್ತಿದ್ದಲ್ಲಿ ಅಂತಹವರು ಅರ್ಹರಿರುವುದಿಲ್ಲ.(ಉದಾ: ಬಿ.ಎ ನಂತರ ಬಿ.ಕಾಂ,
ಎಂ.ಎ (ಕನ್ನಡ) ನಂತರ ಎಂ.ಎ (ಇಂಗ್ಲೀಷ್), ಬಿ.ಎಡ್ ನಂತರ ಎಲ್.ಎಲ್.ಬಿ, ಇತ್ಯಾದಿಗಳಿಗೆ ಪ್ರವೇಶ ಪಡೆದಿದ್ದಲ್ಲಿ)
ಆ) ಸ್ನಾತಕೋತ್ತರ ವೈದ್ಯಕೀಯ ಕೋರ್ಸುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು, ಕೋರ್ಸಿನ ಅವಧಿಯಲ್ಲಿ ಮೆಡಿಕಲ್ ಪ್ರಾಕ್ಟೀಸ್ ಮಾಡುತ್ತಿದ್ದಲ್ಲಿ,
ಈ ಸೌಲಭ್ಯಕ್ಕೆ ಅರ್ಹರಿರುವುದಿಲ್ಲ.
ಇ) ಕಲೆ, ವಿಜ್ಞಾನ, ಹಾಗೂ ವಾಣಿಜ್ಯ ಕೋರ್ಸುಗಳ, ಪದವಿ ಅಥವಾ ಸ್ನಾತಕೋತ್ತರ ಪದವಿಗಳಲ್ಲಿ ಉತ್ತೀರ್ಣ / ಅನುತ್ತೀರ್ಣರಾದವರು ಅಂಗೀಕೃತ
ವೃತ್ತಿಪರ ಅಥವಾ ತಾಂತ್ರಿಕ ಸರ್ಟಿಫಿಕೇಟ್, ಡಿಪ್ಲೋಮ, ಪದವಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡಿದ್ದಲ್ಲಿ, ಹಾಗೂ ಇತರೆ ರೀತಿ ಅರ್ಹರಿದ್ದಲ್ಲಿ ಅವರು
ಈ ಯೋಜನೆಯಡಿ ಸೌಲಭ್ಯಗಳಿಗೆ ಅರ್ಹರಿರುತ್ತಾರೆ. ಒಂದಕ್ಕಿಂತ ಹೆಚ್ಚು ಬಾರಿ ಕೋರ್ಸುಗಳ ಬದಲಾವಣೆ ಮಾಡಿಕೊಂಡವರು ಅರ್ಹರಿರುವುದಿಲ್ಲ.
ಈ) ಒಂದೇ ಕುಟುಂಬದ ಇಬ್ಬರು ಗಂಡು ಮಕ್ಕಳು ಮಾತ್ರ ಈ ಯೋಜನೆಗೆ ಅರ್ಹರು. ಆದರೆ, ಈ ನಿರ್ಬಂಧ ಹೆಣ್ಣು ಮಕ್ಕಳಿಗೆ ಅನ್ವಯಿಸುವುದಿಲ್ಲ.
- ಪ್ರತಿ ವಿದ್ಯಾರ್ಥಿಯ ತರಗತಿ ಹಾಜರಾತಿ ಕನಿಷ್ಟ ಶೇ.75 ರಷ್ಟಿರಬೇಕು.
- ಹೊಸ ವಿದ್ಯಾರ್ಥಿಗಳು: ಹೊಸದಾಗಿ ಅರ್ಜಿ ಸಲ್ಲಿಸುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ವಿದ್ಯಾಸಿರಿ – ಊಟ ಮತ್ತು ವಸತಿ ಸಹಾಯ ಯೋಜನೆ/ ಶುಲ್ಕ ವಿನಾಯಿತಿ / ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಕಾರ್ಯಕ್ರಮಗಳ ಸೌಲಭ್ಯ ಪಡೆಯಲು ಒಂದೇ ಅರ್ಜಿ ಸಲ್ಲಿಸಬೇಕು.
- ನವೀಕರಣ ವಿದ್ಯಾರ್ಥಿಗಳು: ಈಗಾಗಲೇ 2018-19 ನೇ ಸಾಲಿನಲ್ಲಿ ಸಲ್ಲಿಸಿರುವ ಅರ್ಜಿ ಸಂಖ್ಯೆಯನ್ನು ನಮೂದಿಸಿ 2019-20 ನೇ ಸಾಲಿಗೆ ನವೀಕರಣ ಅರ್ಜಿಯನ್ನು ಸಲ್ಲಿಸಬೇಕು.
ಈ ಕೆಳಗಿನ ಮೂಲ ದಾಖಲೆಗಳನ್ನು, ಪ್ರತ್ಯೇಕವಾಗಿ ಸ್ಕ್ಯಾನ್ ಮಾಡಿ, ಅರ್ಜಿ ಸಲ್ಲಿಸುವಾಗ ಆಪ್ ಲೋಡ್ ಮಾಡಬೇಕು.
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಹಿಂದಿನ ವರ್ಷದಲ್ಲಿ ಉತ್ತೀರ್ಣರಾದ ಮೂಲ ಅಂಕಪಟ್ಟಿ
- ಬ್ಯಾಂಕ್ ವಿವರಗಳು (ಪಾಸ್ ಬುಕ್ ನ ಮೊದಲ ಪುಟ)
- ಆಧಾರ್
- ಪಡಿತರ ಚೀಟಿ ಇದ್ದಲ್ಲಿ ಅದರ ಪ್ರತಿ
- ಭಾವಚಿತ್ರ ( Photo)
- SSLC ಅಂಕಪಟ್ಟಿ
ಆನ್-ಲೈನ್ ಅರ್ಜಿ ಸಲ್ಲಿಸುವ ಸೇವೆ ಬಿ.ಸಿ.ರೋಡ್, ಬಂಟ್ವಾಳದಲ್ಲಿನ ನಮ್ಮ (fobza.com) ಕಚೇರಿಯಲ್ಲಿ ಲಭ್ಯ.
- ವಿಳಾಸ: 2 ನೇ ಮಹಡಿ, ವಾಸುದೇವ ಪ್ಲಾಜಾ, ಬಿ.ಸಿ.ರೋಡ್, ಬಂಟ್ವಾಳ.
- ದೂರವಾಣಿ: 9449956744.