Attention to the Mangalore-Bangalore Highway Travelers tomorrow (15.01.2020)
ನಾಳೆ 15.01.2020 ರಂದು ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಪ್ರಯಾಣಿಸುವವರ ಗಮನಕ್ಕೆ..!
ನಾಳೆ, 15.01.2020 ರಂದು ಸಿಎಎ ವಿರೋಧಿಸಿ ಮಂಗಳೂರಿನಲ್ಲಿ ಮುಸ್ಲಿಂ ಸಂಘಟನೆಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಪ್ರಯಾಣಿಸುವ ಪ್ರಯಾಣಿಕರು ಇದನ್ನು ಗಮನದಲ್ಲಿರಿಸಿ.
For ENGLISH content CLICK HERE.
ನಾಳೆ ಬೆ.9 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಸಂಚಾರದಲ್ಲಿ ಬದಲಾವಣೆ ಇರಲಿದ್ದು, ಬೆಂಗಳೂರಿನಿಂದ ಮಂಗಳೂರಿಗೆ ಬರುವ ವಾಹನಗಳು ಮೆಲ್ಕಾರ್, ಕೊಣಾಜೆ, ತೊಕ್ಕೊಟ್ಟು ಮೂಲಕ ಮಂಗಳೂರು ಕಡೆಗೆ ಮತ್ತು ಮಂಗಳೂರಿನಿಂದ ಬೆಂಗಳೂರು ಕಡೆ ಸಾಗುವ ವಾಹನಗಳು ಪಂಪ್ ವೆಲ್, ತೊಕ್ಕೊಟ್ಟು, ಕೊಣಾಜೆ, ಬಿ.ಸಿ.ರೋಡ್ ಮೂಲಕ ಬೆಂಗಳೂರು ಕಡೆಗೆ ಸಾಗಬೇಕು. ಅದೇ ರೀತಿ ಉಡುಪಿಯಿಂದ ಪಡುಬಿದ್ರೆ, ಕಾರ್ಕಳ, ಧರ್ಮಸ್ಥಳ, ಶಿರಾಡಿ ಮೂಲಕ ಬೆಂಗಳೂರು ಕಡೆಗೆ ಮತ್ತು ಬಿ.ಸಿ.ರೋಡ್, ಕೈಕಂಬ, ಪೊಳಲಿ ಮೂಲಕವೂ ಮಂಗಳೂರು ಸಂಪರ್ಕಿಸಲು ಅವಕಾಶ ಕಲ್ಪಿಸಲಾಗಿದೆ.
ಮಂಗಳೂರಿನಲ್ಲಿ ಪ್ರತಿಭಟನೆಗೆ ಅನುಮತಿ ಸಿಗದ ಕಾರಣ, ಮಂಗಳೂರಿನ ಹೊರವಲಯದಲ್ಲಿರುವ ಅಡ್ಯಾರ್ ಕಣ್ಣೂರಿನ, ಷಾ ಗಾರ್ಡನ್‌ನಲ್ಲಿ ಈ ಪ್ರತಿಭಟನೆ ನಡೆಯಲಿದೆ. ಡಿ -19 ಗಲಭೆಯ ನಂತರ ಮುಸ್ಲಿಂ ಸಂಘಟನೆಗಳು ಮೊದಲ ಬಾರಿಗೆ ಪ್ರತಿಭಟನೆ ನಡೆಸುತ್ತಿವೆ.ಮುಸ್ಲಿಂ ಸೆಂಟ್ರಲ್ ಕಮಿಟಿ ನೇತೃತ್ವದಲ್ಲಿ ಹಲವು ಸಂಘಟನೆಗಳು ಭಾಗಿಯಾಗಲಿವೆ.
ದ.ಕ ಮತ್ತು ಉಡುಪಿ ಜಿಲ್ಲೆಯ ಲಕ್ಷಕ್ಕೂ ಅಧಿಕ ಜನ ಸೇರುವ ಸಾಧ್ಯತೆಯಿದ್ದು,ನಿವೃತ್ತ ಐಎಎಸ್ ಅಧಿಕಾರಿ ಹರ್ಷ ಮಂದರ್, ಕಣ್ಣನ್ ಗೋಪಿನಾಥನ್, ವಿಶ್ರಾಂತ ನ್ಯಾಯಮೂರ್ತಿ ಗೋಪಾಲಗೌಡ ಮುಖ್ಯ ಭಾಷಣ ಮಾಡಲಿದ್ದಾರೆ. ಪಿಎಫ್ಐ, ಎಸ್ ಡಿಪಿಐ ಸೇರಿದಂತೆ ಹಲವು ಸಂಘಟನೆಗಳು ಭಾಗಿಯಾಗಲಿವೆ.