Former Karnataka Lokayukta and SC Judge N Venkatachala is no more.
ಭ್ರಷ್ಟರಲ್ಲಿ ನಡುಕ ಹುಟ್ಟಿಸಿದ, ಲೋಕಾಯುಕ್ತ ಸಂಸ್ಥೆಗೆ ಹೊಸ ರೂಪರೇಷೆ ನೀಡಿದ ಲೋಕಾಯುಕ್ತ ಎನ್.ವೆಂಕಟಾಚಲ ವಿಧಿವಶ.
ಭ್ರಷ್ಟರಲ್ಲಿ ನಡುಕ ಹುಟ್ಟಿಸಿದ, ಲೋಕಾಯುಕ್ತ ಸಂಸ್ಥೆಗೆ ಹೊಸ ರೂಪರೇಷೆ ನೀಡಿದ ಲೋಕಾಯುಕ್ತ ಎನ್.ವೆಂಕಟಾಚಲ ಅವರು ತಮ್ಮ 90ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಿವೃತ್ತ ಲೋಕಾಯುಕ್ತ ಎನ್ ವೆಂಕಟಾಚಲ (90) ಅವರು ಇಂದು ಬೆಳಗಿನ ಜಾವ 7 ಘಂಟೆಗೆ ನಿಧನರಾಗಿದ್ದಾರೆ ಎಂದು ಎಂ.ಎಸ್.ರಾಮಯ್ಯ ಆಸ್ಪತ್ರೆ ಮೂಲಗಳು ತಿಳಿಸಿವೆ.
For ENGLISH content CLICK HERE.
ಕರ್ನಾಟಕದ ಲೋಕಾಯುಕ್ತರಾಗಿ ಹಾಗೂ 18 ತಿಂಗಳು ಸುಪ್ರಿಂಕೋರ್ಟ್ ಮುಖ್ಯ ನ್ಯಾಯಧೀಶರಾಗಿ ಕೂಡ ಸೇವೆ ಸಲ್ಲಿಸಿದ್ದ ಇವರ ಪೂರ್ಣ ಹೆಸರು ನಂಜೇಗೌಡ ವೆಂಕಟಾಚಲ. 2001 ರಿಂದ 2006 ರವರೆಗೆ ಕರ್ನಾಟಕ ಲೋಕಾಯುಕ್ತರಾಗಿ ಸೇವೆ ಸಲ್ಲಿಸಿದ್ದ ಅವರು ಲೋಕಾಯುಕ್ತ ಸಂಸ್ಥೆಗೆ ಹೊಸ ರೂಪರೇಷೆ ನೀಡುವ ಮೂಲಕ ಭ್ರಷ್ಟರಲ್ಲಿ ನಡುಕ ಹುಟ್ಟಿಸಿದ್ದರು.
1930 ಜುಲೈ 3ರಂದು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕು ಮಿತ್ತೂರು ಗ್ರಾಮದಲ್ಲಿ ಜನಿಸಿದ ಇವರು ಮೈಸೂರು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವಿ ಪಡೆದು ವಕೀಲರಾಗಿ ವೃತ್ತಿ ಜೀವನ ಆರಂಭಿಸಿದರು.
ನಿವ್ರತ್ತ ಲೋಕಾಯುಕ್ತ ಎನ್.ವೆಂಕಟಾಚಲ ಅವರ ನಿಧನದ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ಹಲವಾರು ಗಣ್ಯರು ಟ್ವಿಟ್ವರ್ ಹಾಗೂ ಇತರ ಮಾದ್ಯಮಗಳ ಮೂಲಕ ಸಂತಾಪ ವ್ಯಕ್ತ ಪಡಿಸಿದ್ದಾರೆ.